HomeKarnatakaBIG NEWS: ಕರ್ತವ್ಯಕ್ಕೆ ಹಾಜರಾಗಬೇಕಿದ್ದ ಹೆಡ್ ಕಾನ್ಸ್ ಟೇಬಲ್ ಏಕಾಏಕಿ ನಾಪತ್ತೆ

BIG NEWS: ಕರ್ತವ್ಯಕ್ಕೆ ಹಾಜರಾಗಬೇಕಿದ್ದ ಹೆಡ್ ಕಾನ್ಸ್ ಟೇಬಲ್ ಏಕಾಏಕಿ ನಾಪತ್ತೆ

ಮಂಗಳೂರು: ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಬೇಕಿದ್ದ ಹೆಡ್ ಕಾನ್ಸ್ ಟೇಬಲ್ ಓರ್ವರು ಏಕಾಏಕಿ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಕಂಕನಾಡಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಮಂಜುನಾಥ್ ಹೆಗ್ಡೆ (41) ನಾಪತ್ತೆಯಾದವರು. ಜನವರಿ 13ರಿಂದ ಮಂಜುನಾಥ್ ಹೆಗ್ಡೆ ನಾಪತ್ತೆಯಾಗಿದ್ದು, ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಜುನಾಥ್ ಅವರನ್ನು ಸಿಸಿಆರ್ ಬಿಗೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಜನವರಿ 13ರಂದು ಮಂಜುನಾಥ್ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. ಕೆಲ ತಂಡಗಳನ್ನು ರಚಿಸಿ ಮಂಜುನಾಥ್ ಗಾಗಿ ಶೋಧ ನಡೆಸಲಾಗಿದೆ. ಮೊಬೈಲ್ ಲೊಕೇಶನ್ ಆಧಾರದಲ್ಲಿ ಹುಡುಕಾಟ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಡ್ ಕಾನ್ಸ್ ಟೇಬಲ್ ಮಂಜುನಾಥ್ ಹೆಗ್ಡೆ ಈ ಹಿಂದೆಯೂ ಇದೇ ರೀತಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು ಎಂದು ಹೇಳಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular