ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಕಾನೂನು ಜಾರಿ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಕಾನೂನು ರೂಪಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ನಾಮಪಲಕ ಹೋರಾಟ ವಿಚಾರವಾಗಿ ನಾರಾಯಣಗೌಡರ ಹೋರಾಟವನ್ನು ಬೆಂಬಲಿಸುತ್ತೇನೆ. ಆದರೆ, ಮತ್ತೊಬ್ಬರಿಗೆ ತೊಂದರೆ ಕೊಡುವುದು ಬೇಡ ಎಂದು ಹೇಳಿದ್ದಾರೆ.

ಸರೋಜಿನಿ ಮಹಿಷಿ ವರದಿ ಎರಡೂ ಸದನಗಳಲ್ಲಿ ಅಂಗೀಕಾರವಾಗಿದ್ದು, ಅದರ ಅನ್ವಯ ನಿಯಮಗಳನ್ನು ಅನುಸರಿಸಲಾಗುತ್ತಿದೆ. ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಪದಗಳು ಇರಬೇಕು ಎಂದು ತಿಳಿಸಿದ್ದಾರೆ.

ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆ ಬಗ್ಗೆ ಟಾಸ್ಕ್ ಫೋರ್ಸ್ ರಚಿಸಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚಿಸಲಿದ್ದು, ಕಾನೂನು ತಂದ ನಂತರ ಕನ್ನಡ ನಾಮಫಲಕ ಹಾಕದಿದ್ದರೆ ಅಂಗಡಿ ಪರವಾನಿಗೆ ರದ್ದು ಮಾಡಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read