ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಜನ್-12 ಈಗಾಗಲೇ ಆರಂಭವಾಗಿದೆ. ಆದರೆ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಂದ ನೋಟಿಸ್ ಜಾರಿ ಮಾಡಲಾಗಿರುವ ಬೆನ್ನಲ್ಲೇ ಇದೀಗ ಕನ್ನಡ ಬಿಗ್ ಬಾಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ನಡೆಸಲು ಪೊಲೀಸರಿಂದ ಅನುಮತಿ ಪಡೆದಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ನೋಟಿಸ್ ನೀಡಲಾಗಿದೆ. ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋವನ್ನು ರಾಮನಗರದ ಬಿಡದಿ ಬಳಿಯ ೩೫ ಎಕರೆ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್ ಹಾಕಿ ನಡೆಸಲಾಗುತ್ತಿದೆ. ಆದರೆ ಇದಕ್ಕೆ ಪೊಲೀಸರಿಂದ ಅನುಮತಿ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ ಬಂದ್ ಮಾಡಿ,ಮ ಜಾಲಿವುಡ್ ಸ್ಟುಡುಯೋಗೆ ಬೀಗ ಹಾಕುವಂತೆ ವರದಿಯಾಗಿದೆ. ಅನಧೀಕೃತವಾಗಿ ಇಲ್ಲಿ ಶೋ ನಡೆಸಲಾಗುತ್ತಿದೆ ಎಂದುಈ ಹಿಂದೆ ವಿದ್ಯುತ್ ಕಡಿತಕ್ಕೂ ಸೂಚನೆ ನೀಡಲಾಗಿತ್ತು. ಇದೀಗ ಪೊಲೀಸರಿಂದ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಮತ್ತೊಂದು ನೋಟಿಸ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಕನ್ನಡ ಬಿಗ್ ಬಾಸ್ ಶೋಗೆ ಮತ್ತೊಂದು ಸಮಸ್ಯೆ ಎದುರಾಗಿದೆ.