HomeLatest NewsBREAKING: ಬಿಗ್ ಬಾಸ್ ಶೋಗೆ ಬಿಗ್ ಶಾಕ್: ಜಾಲಿವುಡ್ ಸ್ಟುಡಿಯೋಗೆ ಬೀಗಮುದ್ರೆ ಹಾಕಲು ಮುಂದಾದ ಅಧಿಕಾರಿಗಳು

BREAKING: ಬಿಗ್ ಬಾಸ್ ಶೋಗೆ ಬಿಗ್ ಶಾಕ್: ಜಾಲಿವುಡ್ ಸ್ಟುಡಿಯೋಗೆ ಬೀಗಮುದ್ರೆ ಹಾಕಲು ಮುಂದಾದ ಅಧಿಕಾರಿಗಳು

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಜನ್-12ಕ್ಕೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಶುರುವಾದ ಒಂದೇ ವಾರದಲ್ಲಿ ಬಂದ್ ಆಗುವ ಸಾಧ್ಯತೆ ದಟ್ಟವಾಗಿದೆ. ಜಾಲಿವುಡ್ ಸ್ಟುಡಿಯೋಗೆ ಬೀಗಮುದ್ರೆ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ.

ರಾಮನಗರದ ಬಿಡದಿ ಬಳಿಯ 35 ಎಕರೆ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್ ಗಳನ್ನು ಹಾಕಿ ಕನ್ನಡ ಬಿಗ್ ಬಾಸ್ ಸೀಜನ್ -12ನ್ನು ನಡೆಸಲಾಗುತ್ತಿದೆ. ಆದರೆ ಬಿಗ್ ಬಾಸ್ ಶೋ ಹಾಗೂ ಸೆಟ್ ಗಳಲ್ಲಿ ಮಾಲಿನ್ಯ ನಿಯಂತ್ರಣದ ನಿಯಮ ಉಲ್ಲಂಘನೆ ಮಾಡಲಾಗಿದೆ. ಜಾಲಿವುಡ್ ಸ್ಟುಡಿಯೋ ಕೂಡ ನಿಯಮ ಉಲ್ಲಂಘನೆ ಮಾಡಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ.

ಇದೇ ವೇಳೆ ಜಾಲಿವುಡ್ ಸ್ಟುಡಿಯೋವಾಗಲಿ, ಬಿಗ್ ಬಾಸ್ ಶೋ ತಂಡವಾಗಲಿ ಶೋ ನಡೆಸಲು ಇಲ್ಲಿ ಪೊಲೀಸರಿಂದ ಯಾವುದೇ ಅನುಮತಿ ಪಡೆದಿಲ್ಲ. ಅನಧಿಕೃತವಾಗಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ಶೋ ಸ್ಥಗಿತಗೊಳಿಸುವಂತೆ ಪೊಲೀಸರು ಕೂಡ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ನೀಡಲೆಂದು ಜಾಲಿವುಡ್ ಸ್ಟುಡಿಯೋ ಸ್ಥಳಕ್ಕೆ ತೆರಳಿದಾಗ ಜಾಲಿವುಡ್ ಸ್ಟುಡಿಯೋಸ್ ಆಗಲಿ, ಬಿಗ್ ಬಾಸ್ ಶೋ ಟೀಂ ಆಗಲಿ ನೋಟಿಸ್ ತೆಗೆದುಕೊಳ್ಳಲು ಹಿಂದೇಟು ಹಾಕಿವೆ. ಈ ಹಿನ್ನೆಲೆಯಲ್ಲಿ ಬಿಡದಿ ತಹಶಿಲ್ದಾರ್, ಪೊಲೀಸ್ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಸ್ ಹಾಗೂ ಬಿಗ್ ಬಾಸ್ ಶೋ ನಡೆಯುತ್ತಿರುವ ಸ್ಥಳಕ್ಕೆ ದೌಡಾಯಿಸಿದ್ದು, ಬಿಗ್ ಬಾಸ್ ಕಾರ್ಯಕ್ರಮ ಹಾಗೂ ಜಾಲಿವುಡ್ ಸ್ಟುಡಿಯೋಗೆ ಬೀಗಮುದ್ರೆ ಹಾಕಲು ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular