HomeKarnatakaಕನ್ನಡ ಪುಸ್ತಕ ಪ್ರಾಧಿಕಾರದಿಂದ ವಿವಿಧ 'ಕನ್ನಡ ಪುಸ್ತಕ ಸೊಗಸು' ಬಹುಮಾನಗಳಿಗಾಗಿ ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರದಿಂದ ವಿವಿಧ ‘ಕನ್ನಡ ಪುಸ್ತಕ ಸೊಗಸು’ ಬಹುಮಾನಗಳಿಗಾಗಿ ಅರ್ಜಿ ಆಹ್ವಾನ


ಧಾರವಾಡ : ಕನ್ನಡ ಪುಸ್ತಕ ಪ್ರಾಧಿಕಾರದಿಂದ 2025 ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಕನ್ನಡ ಪುಸ್ತಕ ಸೊಗಸು ಬಹುಮಾನ ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ ಕಲಾವಿದರ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ ಮೇ 11, 2026 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ವಿಳಾಸಕ್ಕೆ ಸಲ್ಲಿಸಬೇಕು.

ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆಯನ್ನು ವೆಬ್ಸೈಟ್ https://kpp.karnataka.gov.in ರಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 ಸಂಪರ್ಕಿಸಬಹುದು ಎಂದು ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular