HomeLatest NewsBREAKING: ಎಲ್ಲಾ ಇಲಾಖೆಗಳಲ್ಲಿಯೂ ಪೂರ್ಣಪ್ರಮಾಣದಲ್ಲಿ ಕನ್ನಡ ಕಡ್ಡಾಯ: ಸರ್ಕಾರದಿಂದ ಸುತ್ತೋಲೆ ಪ್ರಕಟ

BREAKING: ಎಲ್ಲಾ ಇಲಾಖೆಗಳಲ್ಲಿಯೂ ಪೂರ್ಣಪ್ರಮಾಣದಲ್ಲಿ ಕನ್ನಡ ಕಡ್ಡಾಯ: ಸರ್ಕಾರದಿಂದ ಸುತ್ತೋಲೆ ಪ್ರಕಟ

ಬೆಂಗಳೂರು: ಎಲ್ಲಾ ಇಲಾಖೆಗಳಲ್ಲಿಯೂ ಪೂರ್ಣಪ್ರಮಾಣದಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಎಲ್ಲಾ ಇಲಾಖೆಯ ಕಚೇರಿಯ ನಾಮಫಲಕಗಳು, ದಾಖಲೆಗಳು ಕನ್ನಡದಲ್ಲಿಯೇ ಇರಬೇಕು. ಅರ್ಜಿ, ಪತ್ರಗಳಿಗೂ ಕನ್ನಡದಲ್ಲಿಯೇ ಉತ್ತರ ನೀಡಬೇಕು. ವಿಧಾನಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಡಳಿತದಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು. ಭಾಷಾ ನೀತಿಯನ್ನು ಜಾರಿಗೊಳಿಸುವುದು ಅಧಿಕಾರಿಗಳು ಹಾಗೂ ನೌಕರರ ಕರ್ತವ್ಯ. ವಿಶ್ವವಿದ್ಯಾಲಯಗಳು, ಅನುದಾನಿತ ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು, ನೌಕರರು ಕಟ್ಟುನಿಟ್ಟಿನಲ್ಲಿ ನಿಯಮ ಪಾಲಿಸಬೇಕು ಸೂಚನೆ ಉಲ್ಲಂಘಿಸುವವರ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular