HomeKarnatakaBIG NEWS: ಕನ್ನಡದಲ್ಲೇ ವೈದ್ಯರು ಔಷಧ ಚೀಟಿ ಬರೆದುಕೊಡಲು ಆದೇಶ

BIG NEWS: ಕನ್ನಡದಲ್ಲೇ ವೈದ್ಯರು ಔಷಧ ಚೀಟಿ ಬರೆದುಕೊಡಲು ಆದೇಶ

ಮಂಗಳೂರು: ಔಷಧ ಚೀಟಿಯನ್ನು ವೈದ್ಯರು ಕನ್ನಡದಲ್ಲಿಯೇ ಬರೆದುಕೊಡಲು ಸೂಚನೆ ನೀಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯ ವೈದ್ಯರು ಔಷಧ ಚೀಟಿಗಳನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ಮಾಡುವಂತೆ ರಾಯಚೂರಿನಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಇದನ್ನು ರಾಜ್ಯದಾದ್ಯಂತ ವಿಸ್ತರಿಸಲು ಸರ್ಕಾರದಿಂದ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದ್ದಾರೆ.

ವೈದ್ಯರಿಗೆ ಕನ್ನಡದಲ್ಲಿ ಔಷಧ ಚೀಟಿ ಬರೆಯಲು ಬಾರದಿದ್ದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ರಾಯಚೂರಿನಲ್ಲಿ 36 ಗಂಟೆಗಳ ಕಲಿಕಾ ಕೇಂದ್ರ ಆರಂಭಿಸುತ್ತೇವೆ. ಒಂದು ಕಡೆ ಕಲಿಕಾ ಕೇಂದ್ರ ಶುರುವಾದರೆ ಅದು ತನ್ನಷ್ಟಕ್ಕೆ ತಾನೇ ವಿಸ್ತರಣೆಯಾಗುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈದ್ಯರು ಕನ್ನಡ ವಿರೋಧಿಗಳಲ್ಲ, ಕನ್ನಡದಲ್ಲಿ ಬರೆಯಬೇಕು ಎನ್ನುವ ಪ್ರಜ್ಞೆ ಬಂದಿಲ್ಲ. ನಾವು ಒತ್ತಡ ಹಾಕಿದಲ್ಲಿ ವೈದ್ಯರು ಕನ್ನಡದಲ್ಲಿ ಔಷಧ ಚೀಟಿ ಬರೆದುಕೊಡುತ್ತಾರೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular