HomeIndiaರೈಲ್ವೆ ನೇಮಕಾತಿ: ಅಭ್ಯರ್ಥಿಗಳಿಗೆ ಕನ್ನಡ ಸೇರಿ 13 ಭಾಷೆಗಳಲ್ಲಿ ಪರೀಕ್ಷೆ ಅವಕಾಶ

ರೈಲ್ವೆ ನೇಮಕಾತಿ: ಅಭ್ಯರ್ಥಿಗಳಿಗೆ ಕನ್ನಡ ಸೇರಿ 13 ಭಾಷೆಗಳಲ್ಲಿ ಪರೀಕ್ಷೆ ಅವಕಾಶ

ಬೆಂಗಳೂರು: ಸಹಾಯಕ ಲೋಲೋ ಪೈಲಟ್ ಹುದ್ದೆಗಳಿಗೆ ಎರಡು ಹಂತಗಳ ಕಂಪ್ಯೂಟರ್ ಆಧರಿತ ಪರೀಕ್ಷೆಯನ್ನು ಕನ್ನಡ, ಕೊಂಕಣಿ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಭಾರತೀಯ ರೈಲ್ವೆ ಅವಕಾಶ ನೀಡಿದೆ.

ಈಗ ಟೆಕ್ನಿಷಿಯನ್ ಗಳ ನೇಮಕಾತಿಗೆ ಪರೀಕ್ಷೆಗೂ ಈ ನಿಯಮ ಅನ್ವಯಿಸಲಾಗಿದೆ. ಇಂಗ್ಲೀಷ್, ಹಿಂದಿ ಮಾತ್ರವಲ್ಲದೆ, ಕನ್ನಡ, ಕೊಂಕಣಿ, ತಮಿಳು, ತೆಲುಗು, ಮಲಯಾಳಂ ಸೇರಿ 13 ಭಾಷೆಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಬಹುದು.

ಈ ವರ್ಷ ಗ್ರೇಡ್ -1 ಮತ್ತು ಗ್ರೇಡ್ -3 ವೃಂದದ 9144 ಟೆಕ್ನಿಷಿಯನ್ ಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ಒಟ್ಟು ಹುದ್ದೆಗಳಲ್ಲಿ ರಾಜ್ಯದ ನೈರುತ್ಯ ರೈಲ್ವೆಗೆ 426 ಹುದ್ದೆಗಳನ್ನು ಮೀಸಲಿಡಲಾಗಿದ್ದು, ಪದವಿ, ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular