ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಿಂದ ಹೋಮ-ಹವನ: ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಖ್ಯಾತ ನಟ-ನಟಿಯರು

ಬೆಂಗಳೂರು: ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಿಂದ ಹಿರಿಯ ನಟ ದೊಡ್ಡಣ್ಣ ದಂಪತಿ ನೇತೃತ್ವದಲ್ಲಿ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಸಮ್ಮುಖದಲ್ಲಿ ವಿಶೇಷ ಹೋಮ-ಹವನ ನಡೆಸಲಾಗಿದೆ.

ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಗಣಪತಿ ಹೋಮ, ಸರ್ಪಶಾಂತಿ, ಮೃತ್ಯುಂಜಯ ಹೋಮ ಸೇರಿದಂತೆ ಹಲವು ರೀತಿಯ ಹೋಮ-ಹವನ, ವಿಶೇಷ ಪೂಜೆಗಳನ್ನು 8 ಜನರ ಪುರೋಹಿತರ ನೇತೃತ್ವದಲ್ಲಿ ನೆರವೇರಿಸಲಾಗಿದೆ.

ಕೋವಿಡ್ ಬಳಿಕ ಕನ್ನಡ ಚಿತ್ರರಂಗಕ್ಕೆ ಎದುರಾಗಿರುವ ಸಂಕಷ್ಟ, ನಟರ ಅಗಲಿಕೆ, ಚಿತ್ರರಂಗಕ್ಕೆ ಎದುರಾಗಿರುವ ಸಂಕಷ್ಟಗಳ ನಿವಾರಣೆ ಹಾಗೂ ಕನ್ನಡ ಚಿತ್ರರಂಗದ ಅಭಿವೃದ್ಧಿಗಾಗಿ ಈ ಪೂಜೆ ನೆರವೇರಿಸಲಾಗಿದೆ. ವಿಶೇಷ ಪೂಜೆಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟ-ನಟಿಯರು, ಕಲಾವಿದರು ಪಾಲ್ಗೊಂಡಿದ್ದಾರೆ.

ಕನ್ನಡ ಚಿತ್ರರಂಗದ ನಿರ್ದೇಶಕರು, ನಿರ್ಮಾಪಕರು, ತಂತ್ರಜ್ಞರು, ಕಲಾವಿದರು, ಹಿರಿಯ ನಟಿ ಗಿರಿಜಾ ಲೋಕೇಶ್, ಪದ್ಮಾವಾಸಂತಿ, ಪದ್ಮಜಾ ರಾವ್, ಶಾಂತಲಾ, ವಾಣಿಶ್ರೀ, ನಟರಾದ ಪ್ರೇಮ್, ಅಭಿಷೇಕ್ ಅಂಬರೀಶ್ ಸೇರಿದಂತೆ ಬಹುತೇಕ ಕಲಾವಿದರು ಪಾಲ್ಗೊಂಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read