HomeLatest NewsBIG NEWS : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಎಲ್ಲಾ ಚಿತ್ರಮಂದಿರಗಳಲ್ಲಿ 1 ವಾರ ಕನ್ನಡ ಚಲನಚಿತ್ರ...

BIG NEWS : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಎಲ್ಲಾ ಚಿತ್ರಮಂದಿರಗಳಲ್ಲಿ 1 ವಾರ ಕನ್ನಡ ಚಲನಚಿತ್ರ ಪ್ರದರ್ಶನ ಕಡ್ಡಾಯ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಎಲ್ಲಾ ಖಾಯಂ, ಅರೆ ಖಾಯಂ, ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.01 ರಿಂದ 07 ರ ವರೆಗೆ ಒಂದು ವಾರಗಳ ಕಾಲ ಕನ್ನಡ ಚಲನಚಿತ್ರಗಳನ್ನು ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳ ಮಾಲೀಕರು ಪ್ರದರ್ಶಿಸಬೇಕು ಎಂದು ಬಳ್ಳಾರಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ತಿಳಿಸಿದ್ದಾರೆ.

ಒಂದು ವೇಳೆ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸದೇ ಇದ್ದಲ್ಲಿ ಚಲನಚಿತ್ರ ಮಂದಿರಗಳ ಪರವಾನಿಗೆಯನ್ನು ನವೀಕರಿಸುವುದಿಲ್ಲ. ಅ.31 ಮತ್ತು ನ.01 ರಂದು ಚಿತ್ರಮಂದಿರಗಳ ಮೇಲೆ ಕಡ್ಡಾಯವಾಗಿ ದೀಪಾಂಲಕಾರ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular