HomeKarnatakaCBSE ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

CBSE ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ಕನ್ನಡ ಭಾಷೆ ಬೋಧನೆ ಕಡ್ಡಾಯ ನಿಯಮ ಅಸಂವಿಧಾನಿಕವೆಂದು ಘೋಷಿಸಲು ಅರ್ಜಿದಾರರು ಕೋರಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸಿಬಿಎಸ್ಇ ಮತ್ತು ಸಿಐಎಸ್‌ಇ ಮಾನ್ಯತೆ ಪಡೆದ ಶಾಲೆಗಳಲ್ಲಿ ಕನ್ನಡವನ್ನು ಒಂದು ವಿಷಯವಾಗಿ ಕಲಿಸಬೇಕೆಂದು ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿದ ಅರ್ಜಿಯ ಸಂಬಂಧ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರ್ಲೆ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ವಿಭಾಗೀಯ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆದಿದ್ದು, ಪ್ರತಿವಾದಿಗಳಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ 2 ವಾರ ವಿಚಾರಣೆ ಮುಂದೂಡಲಾಗಿದೆ.

ಮಕ್ಕಳ ಪೋಷಕ ಬೆಂಗಳೂರಿನ ಕಾಕ್ಸ್ ಟೌನ್ ನಿವಾಸಿ ಸಿ. ಸೋಮಶೇಖರ್ ಸೇರಿದಂತೆ ಸಿಬಿಎಸ್ಇ, ಐಸಿಎಸ್‌ಇ ಮಾನ್ಯತೆ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಪೋಷಕರು, ಶಿಕ್ಷಕರು ಸಲ್ಲಿಸಿದ ಪಿಐಎಲ್ ವಿಚಾರಣೆ ನಡೆಸಿದ ವಿಭಾಗೀಯಪೀಠ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕ ಭಾಷಾ ಕಲಿಕೆ ಕಾಯ್ದೆ, ಕರ್ನಾಟಕ ಭಾಷಾ ಕಲಿಕಾ ನಿಯಮಗಳು, ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ ನಿರಾಕ್ಷೇಪಣಾ ಪತ್ರ ನೀಡಿಕೆ ಮತ್ತು ನಿಯಂತ್ರಣ ನಿಯಮಗಳ ಅನ್ವಯ ರಾಜ್ಯದಲ್ಲಿ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಮಾನ್ಯತೆ ಪಡೆದ ಶಾಲೆಗಳು ಕನ್ನಡವನ್ನು ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಭೋದಿಸಬೇಕು. ಕನ್ನಡ ಕಲಿಸದಿದ್ದಲ್ಲಿ ಶಿಕ್ಷಣ ಸಂಸ್ಥೆಗೆ ನೀಡಲಾಗಿರುವ ನಿರಾಕ್ಷೇಪಣಾ ಪತ್ರ ಹಿಂಪಡೆಯಲಾಗುವುದು ಎಂದು 2022ರ ಮೇ 13 ರಂದು ರಾಜ್ಯ ಸರ್ಕಾರ ಅಧಿ ಸೂಚನೆ ಹೊರಡಿಸಿತ್ತು.

ಅಧಿಸೂಚನೆಯ ಬಗ್ಗೆ ಅರ್ಜಿದಾರರು ಪ್ರಶ್ನಿಸಿದ್ದಾರೆ. ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಅಧಿಸೂಚನೆಯಿಂದ ತೊಂದರೆಯಾಗುತ್ತದೆ. ಕರ್ನಾಟಕದಲ್ಲಿ ತಮ್ಮ ಇಚ್ಛೆಯಂತೆ ಪ್ರಥಮ, ದ್ವಿತೀಯ, ತೃತೀಯ ಭಾಷೆಯನ್ನು ಕಲಿಯುವ ವಿದ್ಯಾರ್ಥಿಗಳ ಹಕ್ಕಿಗೆ ಧಕ್ಕೆಯಾಗುತ್ತದೆ. ಮಕ್ಕಳ ಶೈಕ್ಷಣಿಕ ಬದುಕಿನ ಮೇಲೆ ಪರಿಣಾಮ ಬೀರುತ್ತದೆ. ಮುಂದೆ ಅವರ ಉದ್ಯೋಗಾವಕಾಶಗಳಿಗೆ ಅಡ್ಡಿಯಾಗುತ್ತದೆ. ಕನ್ನಡ ಹೊರತುಪಡಿಸಿ ಬೇರೆ ವಿಷಯಗಳನ್ನು ಬೋಧಿಸುವ ಶಿಕ್ಷಕರ ಜೀವನಕ್ಕೂ ಸಮಸ್ಯೆಯಾಗುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular