ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು : 3 ದಿನಗಳ ಕಮ್ಮಟಕ್ಕೆ ಅರ್ಜಿ ಆಹ್ವಾನ

ಧಾರವಾಡ : ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾವೇರಿ ಜಿಲ್ಲೆ ಗೋಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಎಂಬ ಹೆಸರಿನಲ್ಲಿ 3 ದಿನಗಳ ಕಮ್ಮಟವನ್ನು ಏಪ್ರಿಲ್ 21, 22 ಮತ್ತು 23 ರಂದು ಹಾವೇರಿ ಜಿಲ್ಲೆ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಎಪ್ರಿಲ್ 05, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬೆಸೈಟ್ http://karnatakasahithyaacademy.org ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read