HomeKarnatakaBIG NEWS: ಕನ್ನಡ ನಾಡಿನಲ್ಲಿ ಕನ್ನಡ ಬೋರ್ಡ್ ಇರಲೇಬೇಕು; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

BIG NEWS: ಕನ್ನಡ ನಾಡಿನಲ್ಲಿ ಕನ್ನಡ ಬೋರ್ಡ್ ಇರಲೇಬೇಕು; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಕನ್ನಡ ನಾಮಫಲಕ ಕಡ್ದಾಯ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ನಾಡಿನಲ್ಲಿ ಕನ್ನಡ ಬೋರ್ಡ್ ಇರಲೇಬೇಕು. ಎಲ್ಲರೂ ಕನ್ನಡ ನಾಮಫಲಕ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕನ್ನಡ ಬೋರ್ಡ್ ಹಾಕಬೇಕು. ಬೇರೆ ಭಾಷೆಯ ಬೋರ್ಡ್ ಗಳನ್ನು ಹಾಕುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಕನ್ನಡ ನಾಮಫಲಕ ನಿಯಮ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ. ಈ ಬಗ್ಗೆಯೂ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಕರವೇ ಪ್ರತಿಭಟನೆ ವಿಚಾರವಾಗಿ ಯಾರೇ ಆಗಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ. ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಕ್ರಮವಾಗಲಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular