HomeKarnatakaರಾಜ್ಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ರಾಜ್ಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಮಾರಣಾಮ್ತಿಕ ಹಲ್ಲೆ ನಡೆಸಿರುವ ಘಟನೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಸೋಷಿಯಲ್ ಕ್ಲಬ್ ಬಳಿ ಈ ಘಟನೆ ನಡೆದಿದ್ದು, ಮಲ್ಲೇಶ್ ಪೂಜಾರಿ (29) ಹಲ್ಲೆಗೊಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೂಪಕ ವಾಹನದ ಮೇಲೆ ಕುಳಿತಿದ್ದ ಯುವಕನ ಮೇಲೆ ಹಿಂದಿನಿಂದ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಲ್ಲಿ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಲ್ಲೇಶ್ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ಖಡೇ ಬಜಾರ್ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular