ಬೆಂಗಳೂರು: 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ಬಹುಭಾಷಾ ನಟ ಪ್ರಕಾಶ್ ರಾಜ್, ನಟಿ, ನಿರ್ಮಾಪಕಿ ವಿಜಯಲಕ್ಷ್ಮೀ ಸಿಂಗ್ ಅವರಿಗೆ ರಾಜ್ಯೋತ್ಸವ ಪ್ರಶಸಿ ಘೋಷಣೆಯಾಗಿದೆ.
ನಿವೃತ್ತ ಐಎ ಎಸ್ ಅಧಿಕಾರಿ ಸಿದ್ದಯ್ಯ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ರಾಜೇಂದ್ರ ಚೆನ್ನಿ, ತುಂಬಾಡಿ ರಾಮಯ್ಯ ಅವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪೌರ ಕಾರ್ಮಿಕರಾದ ಫಕೀರವ್ವ ಅವರೂ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
