HomeKarnatakaಭಾನುವಾರವಾದರೂ ನವೆಂಬರ್ 1ರಂದು ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ

ಭಾನುವಾರವಾದರೂ ನವೆಂಬರ್ 1ರಂದು ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು, ಅ.29: ಈ ವರ್ಷ ನವೆಂಬರ್ 1ರಂದು ಭಾನುವಾರವಾಗಿದ್ದರೂ, ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಆಚರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.

ನಿರ್ಧಿಷ್ಟ ದಿನದಂದು ಹೊಂದಾಣಿಕೆ

ಈ ಸಂಬಂಧ ಅಕ್ಟೋಬರ್ 15ರಂದು ಸುತ್ತೋಲೆ ಹೊರಡಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರ ಕಚೇರಿ, ರಾಜ್ಯದಾದ್ಯಂತ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಸೇರಿದಂತೆ ರಾಷ್ಟ್ರೀಯ ಹಾಗೂ ರಾಜ್ಯ ಹಬ್ಬಗಳನ್ನು ನಿಗದಿತ ದಿನದಂದೇ ಗೌರವಯುತವಾಗಿ ಆಚರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ರಜಾದಿನವಾಗಿರುವ ಕಾರಣಕ್ಕೆ ರಾಜ್ಯ ಹಬ್ಬಗಳ ಆಚರಣೆಯನ್ನು ಮುಂದೂಡುವಂತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಹೀಗಾಗಿ ನವೆಂಬರ್ 1ರಂದು ಭಾನುವಾರವಾದರೂ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆಯ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರ ಪ್ರತಿಕ್ರಿಯೆ

ಈ ಕುರಿತು ಪ್ರತಿಕ್ರಿಯಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, “ರಾಜ್ಯೋತ್ಸವ ಆಚರಣೆಯನ್ನು ಯಾರೂ ನಿರ್ಲಕ್ಷಿಸಬಾರದು. ಇದು ನಮ್ಮ ಹಬ್ಬ, ನಮ್ಮ ಹೆಮ್ಮೆಯ ದಿನ” ಎಂದು ಹೇಳಿದ್ದಾರೆ.

ಕನ್ನಡ ಭಾಷೆ, ನಾಡು-ನುಡಿ, ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ರಾಜ್ಯೋತ್ಸವವನ್ನು ಗೌರವಯುತವಾಗಿ ಆಚರಿಸುವಂತೆ ಇಲಾಖೆ ಸೂಚಿಸಿದೆ. ರಜಾದಿನದ ನೆಪದಲ್ಲಿ ಆಚರಣೆಯಿಂದ ಹಿಂದೆ ಸರಿಯದೆ, ಕನ್ನಡದ ಅಭಿಮಾನವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ನಿಟ್ಟಿನಲ್ಲಿ ಶಾಲೆಗಳು ಕ್ರಮ ಕೈಗೊಳ್ಳಬೇಕಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular