HomeKarnatakaಕನ್ನಡ ರಾಜ್ಯೋತ್ಸವ ಪ್ರಯುಕ್ತ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರ ಕನ್ನಡ ಚಿತ್ರಗಳ ಪ್ರದರ್ಶನ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರ ಕನ್ನಡ ಚಿತ್ರಗಳ ಪ್ರದರ್ಶನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಎಲ್ಲಾ ಖಾಯಂ, ಅರೆ ಖಾಯಂ ಹಾಗೂ ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.1 ರಿಂದ 7 ರ ವರೆಗೆ ಒಂದು ವಾರಗಳ ಕಾಲ ಕನ್ನಡ ಚಲನಚಿತ್ರಗಳನ್ನು ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳ ವ್ಯವಸ್ಥಾಪಕರು  ಪ್ರದರ್ಶಿಸಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಒಂದು ವೇಳೆ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸದೇ ಇದ್ದಲ್ಲಿ ಚಲನಚಿತ್ರ ಮಂದಿರಗಳ ಪರವಾನಿಗೆಯನ್ನು ನವೀಕರಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಅ.31 ಮತ್ತು ನ.1 ರಂದು ಚಿತ್ರಮಂದಿರಗಳ ಮೇಲೆ ಕಡ್ಡಾಯವಾಗಿ ದೀಪಾಂಲಕಾರ ಮಾಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular