ಬೆಂಗಳೂರು: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವದ ಸಡಗರ-ಸಂಭ್ರಮ ಮನೆ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ.
70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಮೊದಲಿಗೆ ರಾಷ್ಟ್ರಧ್ವಜ ಬಳಿಕ ಕನ್ನಡ ಧ್ವಜಾರೀಹಣ ನೆರವೇರಿಸಿದರು. ಈ ವೇಳೆ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದರು.
ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿಯೂ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಧ್ವಜಾರೋಹಣ ನೆರವೇರಿಸಿದ್ದಾರೆ.
