HomeLatest NewsBREAKING: ಬೆಂಗಳೂರಿನಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

BREAKING: ಬೆಂಗಳೂರಿನಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವದ ಸಡಗರ-ಸಂಭ್ರಮ ಮನೆ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ.

70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಮೊದಲಿಗೆ ರಾಷ್ಟ್ರಧ್ವಜ ಬಳಿಕ ಕನ್ನಡ ಧ್ವಜಾರೀಹಣ ನೆರವೇರಿಸಿದರು. ಈ ವೇಳೆ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದರು.

ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿಯೂ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಧ್ವಜಾರೋಹಣ ನೆರವೇರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular