2023-24 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ :  ಕನ್ನಡ ಸಾಹಿತ್ಯ ಪರಿಷತ್ತು 2023-24 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ.

2023ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಸೆಪ್ಟಂಬರ್ 15 ರವರೆಗೆ ದಂಡ ಶುಲ್ಕ ರೂ. 30/- ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಅರ್ಜಿ ಸಲ್ಲಿಸುವವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ. 25/- ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು.

ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ರೂ.25/- ಗಳ ಶುಲ್ಕ ಪಾವತಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ಜು.01 ರಿಂದ ಪಡೆಯಬಹುದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಹೆಸರಿಗೆ ರೂ.30/-ಮನಿಯಾರ್ಡರ್ ಮಾಡಿದರೆ ಅರ್ಜಿದಾರರು ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು ದೂರವಾಣಿ ಸಂಖ್ಯೆ : 080-26612991/22423867/26623584 ಗಳನ್ನು ಸಂಪರ್ಕಿಸುವಂತೆ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read