HomeLive Newsಹುಟ್ಟುಹಬ್ಬದ ಸಂಭ್ರಮದಲ್ಲಿ ಕನ್ನಡಿಗ ಮನೀಶ್ ಪಾಂಡೆ

ಹುಟ್ಟುಹಬ್ಬದ ಸಂಭ್ರಮದಲ್ಲಿ ಕನ್ನಡಿಗ ಮನೀಶ್ ಪಾಂಡೆ

ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಹೆಸರುವಾಸಿಯಾಗಿರುವ ಕನ್ನಡಿಗ ಮನೀಶ್ ಪಾಂಡೆ ಇಂದು ತಮ್ಮ 35ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.

ಅಪಾರ  ಅನುಭವವಿದ್ದರೂ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹೆಚ್ಚಿನ ಅವಕಾಶ ದೊರೆಯದೆ ವಂಚಿತರಾದವರಲ್ಲಿ ಮನಿಷ್ಪಾಂಡೆ ಕೂಡ ಸೇರುತ್ತಾರೆ.  2015  ಜುಲೈ 14 ರಂದು ನಡೆದ ಭಾರತ ಹಾಗೂ ಜಿಂಬಾಂಬೆ ನಡುವಣ ಏಕದಿನ ಏಕದಿನ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಬಳಿಕ ಟಿ ಟ್ವೆಂಟಿ ಸರಣಿಯಲ್ಲೂ ಭರ್ಜರಿ ಪ್ರದರ್ಶನ ತೋರಿದರು. 2021 ಜುಲೈ 23 ರಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆದ ಏಕದಿನ ಪಂದ್ಯದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ, ಮನೀಶ್ ಪಾಂಡೆ  ಅವರಿಗೆ ಮತ್ತೊಮ್ಮೆ ಅವಕಾಶ ಸಿಗದೇ ದೂರ ಉಳಿದರು.

ಐಪಿಎಲ್ ವಿಚಾರಕ್ಕೆ ಬಂದರೆ ಆರಂಭದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು  ತಂಡದಲ್ಲಿದ್ದ ಇವರು ಸುಮಾರು ಏಳು ತಂಡಗಳಲ್ಲಿ ಬದಲಾವಣೆಯಾಗಿದ್ದಾರೆ. ಇತ್ತೀಚಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿದ್ದು, ಮಹಾರಾಜ ಟ್ರೋಫಿಯಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡದ ನಾಯಕರಾಗಿದ್ದಾರೆ. ಇಂದು ಹಲವಾರು ಕ್ರಿಕೆಟಿಗರು ಮನಿಷ್ಪಾಂಡೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular