ಕನ್ನಡಿಗರ ‘ ನನ್ನ ತೆರಿಗೆ ನನ್ನ ಹಕ್ಕು’ ಟ್ವಿಟರ್ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ-CM ಸಿದ್ದರಾಮಯ್ಯ

ಬೆಂಗಳೂರು : ಕನ್ನಡಿಗರು ನಡೆಸುತ್ತಿರುವ ‘ನನ್ನತೆರಿಗೆ ನನ್ನಹಕ್ಕು’ ಟ್ವಿಟರ್ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ  ”ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ #ನನ್ನತೆರಿಗೆನನ್ನಹಕ್ಕು ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ. ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ” ಎಂದಿದ್ದಾರೆ.

‘ದಕ್ಷಿಣ ಭಾರತದ ರಾಜ್ಯಗಳ ತೆರಿಗೆಯ ಋಣದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾಡೆಲ್ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು. ಶ್ರಮದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾಡೆಲ್’.

ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು ಎಂಬಂತಿದೆ ದೇಶದಲ್ಲಿ ಕನ್ನಡಿಗರ ಸ್ಥಿತಿ. ಇದು ಬದಲಾಗಲೇಬೇಕು. ನ್ಯಾಯಕ್ಕಾಗಿ ಧ್ವನಿಯೆತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು. ನಿಮ್ಮ ಜೊತೆ ನಾನಿದ್ದೇನೆ, ನಮ್ಮೆಲ್ಲರ ಧ್ವನಿ ಒಟ್ಟಾದರೆ ದಿಲ್ಲಿವರೆಗೆ ಕೇಳುವುದು ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

https://twitter.com/siddaramaiah/status/1754123069839548653

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read