‘ಕರ್ನಾಟಕವನ್ನು ಕಡೆಗಣಿಸಿದ ಬಿಜೆಪಿಗರಿಗೆ ಕನ್ನಡಿಗರು ತಕ್ಕ ಪಾಠ ಕಲಿಸಲಿದ್ದಾರೆ’ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕರ್ನಾಟಕವನ್ನು ಕಡೆಗಣಿಸಿದ ಬಿಜೆಪಿಗರಿಗೆ ಕನ್ನಡಿಗರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಈ ಬಗ್ಗೆ ಕಿಡಿಕಾರಿದ ಸಚಿವರು ಕೇಂದ್ರ ಬಿಜೆಪಿಗರಿಗೆ ಕರ್ನಾಟಕ, ಕನ್ನಡಿಗರು ಎಂದರೆ ಅಸಡ್ಡೆ ಮನೋಭಾವ ಬಂದಿದೆ. ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಕರ್ನಾಟಕದ ಭವ್ಯ ಪರಂಪರೆಯನ್ನು ಪ್ರತಿಬಿಂಬಿಸಬೇಕಾಗಿದ್ದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡದೆ ಗಣತಂತ್ರ ವ್ಯವಸ್ಥೆಗೆ ಅಪಮಾನವೆಸಗಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಕರ್ನಾಟಕದ ಜನತೆಗೆ, ಬರ ಪರಿಹಾರ, GST, NDRF ನಿಧಿ, 15ನೇ ಹಣಕಾಸು ಆಯೋಗದ ಅನುದಾನ ಸೇರಿದಂತೆ ಪ್ರತಿಯೊಂದು ವಿಷಯಗಳಲ್ಲೂ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಾ ಬರುತ್ತಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕವನ್ನು ಕಡೆಗಣಿಸಿ ದ್ವೇಷ ರಾಜಕಾರಣ ಮಾಡುತ್ತಿರುವ ಬಿಜೆಪಿಗರಿಗೆ ಮುಂಬರುವ ದಿನಗಳಲ್ಲಿ ಕನ್ನಡಿಗರು ತಕ್ಕ ಪಾಠ ಕಲಿಸಲಿದ್ದಾರೆ  ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read