ಬೆಂಗಳೂರು: ಕನ್ನಮಂಗಲ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಯುವತಿಯರು ಹಾಗೂ 24 ಯುವಕರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಈಶಾನ್ಯ ಡಿಸಿಪಿ ಸಜಿತ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಪಿ ಸಜಿತ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಬಳಿಯ ಫರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಇಂದು ಮುಂಜಾನೆ 5 ಗಂಟೆಗೆ ದಾಳಿ ನಡೆಸಲಾಗಿತ್ತು. ರೇವ್ ಪಾರ್ಟಿ ಸಂಬಂಧ ಎನ್ ಡಿಪಿಎಸ್ ಕಾಯ್ದೆಯಡಿ ಕೇಸ್ ದಾಖಲಾಗಿದೆ ಎಂದರು.
ಷರೀಫ್ ಬರ್ತ್ ಡೇ ಪಾರ್ಟಿಯಲ್ಲಿ ರಾತ್ರಿಯಿಡಿ ಮಾದಕವಸ್ತು ಬಳಿಸಿದ್ದಾರೆ. 7 ಯುವತಿಯರು, 24 ಯುವಕರನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಐಟಿ ಸೆಕ್ಟರ್ ನಲ್ಲಿ ಕೆಲಸ ಮಾಡುತ್ತಿದ್ದವರು. ರೇವ್ ಪಾರ್ಟಿಯಲ್ಲಿ ಓರ್ವ ಡ್ರಗ್ ಪೆಡ್ಲರ್ ಕೂಡ ಭಗಿಯಾಗಿದ್ದ. ಫಾರ್ಮ್ ಹುಸ್ ಮಾಲೀಕನ ವಿರುದ್ಧವೂ ಪ್ರಕರ್ಣ ದಾಖಲಿಸಲಾಗಿದೆ ಎಂದು ತಿಳಿಸಿದರು.