ಬೆಂಗಳೂರು : ಇಂದು ಡಿವೈನ್ ಸ್ಟಾರ್, ನಟ ರಿಷಬ್ ಶೆಟ್ಟಿ ಹುಟ್ಟುಹಬ್ಬ. ಹೌದು, ರಿಷಬ್ ಶೆಟ್ಟಿ ಅವರು 41 ವರ್ಷ ಮುಗಿಸಿ 42 ಕ್ಕೆ ಕಾಲಿಡುತ್ತಿದ್ದಾರೆ.
ಈ ಪ್ರಯುಕ್ತ ಹೊಂಬಾಳೆ ಫಿಲ್ಮ್ಸ್ ಕಾಂತಾರ-1 ಸಿನಿಮಾದ ಪೋಸ್ಟರ್ ರಿಲೀಸ್ ಮಾಡುವ ಮೂಲಕ ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಗಿಫ್ಟ್ ನೀಡಿದೆ.
ನಟ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ‘ಕಾಂತಾರ: ಅಧ್ಯಾಯ 1’ ಚಿತ್ರ 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ. ಹೌದು, ಅ. 2 ರಂದು ಏಳು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. ‘ಕಾಂತಾರ’ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಸದ್ಯದ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ‘ಕಾಂತಾರ’ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡಿತ್ತು. ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟಿದೆ. ಇದೀಗ ಕಾಂತಾರ ಚಾಪ್ಟರ್ 1 ತೆರೆ ಮೇಲೆ ಬರಲು ಸಜ್ಜಾಗುತ್ತಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಇಂಗ್ಲೀಷ್ ಹಾಗೂ ಬೆಂಗಾಲಿ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.
Where legends are born and the roar of the wild echoes… 🔥#Kantara – A prequel to the masterpiece that moved millions.
— Hombale Films (@hombalefilms) July 7, 2025
Wishing the trailblazing force behind the legend, @shetty_rishab a divine and glorious birthday.
The much-awaited prequel to the divine cinematic… pic.twitter.com/0dTSh2lZ4k