BIG NEWS: ಕಾಂತಾರ-2 ಚಿತ್ರತಂಡಕ್ಕೆ ಬಿಗ್ ರಿಲೀಫ್

ಬೆಂಗಳೂರು: ರಿಷಬ್ ಶೆಟ್ಟಿ ಅಭಿನಯದ ಕಾಂತಾರ-2 ಚಿತ್ರತಂಡಕ್ಕೆ ಅರಣ್ಯ ಇಲಾಖೆ ಬಿಗ್ ರಿಲೀಫ್ ನೀಡಿದೆ. ಕಾಂತಾರ-2 ಚಿತ್ರತಂಡ ಯಾವುದೇ ಅರಣ್ಯ ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ವರದಿ ನೀಡಿದೆ.

ಹಾಸನ ಜಿಲ್ಲೆಯ ಸಕಲೇಶಪುರ ಬಳಿ ಅರಣ್ಯ ಪ್ರದೇಶದಲ್ಲಿ ಕಾಂತಾರ-2 ಸಿನಿಮಾ ಚಿತ್ರೀಕರಣ ಮಡಲಾಗುತ್ತಿದ್ದು, ಇದರಿಂದ ಅರಣ್ಯ ಪ್ರದೇಶಕ್ಕೆ ಹಾನಿಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಸಕಲೇಶಪುರ ಎಸಿಎಫ್ ಹಾಗೂ ಯಸಳೂರು ಆರ್ ಎಫ್ ಒ ಸ್ಥಳ ಪರಿಶೀಲನೆ ನಡೆಸಿದ್ದು, ಚಿತ್ರೀಕರಣದ ವೇಳೆ ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ. ಯಾವುದೇ ಸ್ಫೋಟ ನಡೆಸಿಲ್ಲ. ಡೀಮ್ಡ್ ಅರಣ್ಯ ವಲಯದಲ್ಲಿ ಮರಗಳನ್ನು ಕಡಿದಿಲ್ಲ. ಚಿತ್ರತಂಡ ಅರಣ್ಯ ನಿಯಮಗಳನ್ನು ಪಾಲಿಸಿ ಚಿತ್ರೀಕರಣ ಮಾಡಿದೆ ಎಂದು ವರದಿ ನೀಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read