ಸಿನಿ ರಸಿರಕರಿಗೆ ಸಿಹಿಸುದ್ದಿ: ಬಹುನಿರೀಕ್ಷಿತ ‘ಕಾಂತಾರ -2’ ಬಿಡುಗಡೆ ದಿನಾಂಕ ಫಿಕ್ಸ್

ಮಂಗಳೂರು: ಬಹುನಿರೀಕ್ಷಿತ ‘ಕಾಂತಾರ -2’ ಸಿನಿಮಾ ಅಕ್ಟೋಬರ್ 2ರಂದು ಬಿಡುಗಡೆಯಾಗಲಿದೆ. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದ್ದ ನಟ ನಿರ್ದೇಶಕ ರಿಷಬ್ ಶೆಟ್ಟಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಕಟೀಲು ಭ್ರಮರಾಂಬಿಕೆ ಸನ್ನಿಧಿಗೆ ಪತ್ನಿ, ಮಕ್ಕಳೊಂದಿಗೆ ಆಗಮಿಸಿದ್ದ ರಿಷಬ್ ಶೆಟ್ಟಿ ‘ಕಾಂತಾರ-2’ ಚಿತ್ರದ ಯಶಸ್ವಿಗಾಗಿ ಪ್ರಾರ್ಥನೆ ಸಲ್ಲಿಸಿ ದೇವಿಗೆ ಸೀರೆ ಹರಕೆ ಸಮರ್ಪಿಸಿದ್ದಾರೆ.

ದೇವಾಲಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂತಾರ -2’ ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ. ಅಕ್ಟೋಬರ್ 2ರಂದು ಚಿತ್ರವನ್ನು ಬಿಡುಗಡೆ ಮಾಡುವ ಚಿಂತನೆ ಇದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read