HomeEntertainmentBREAKING: 'ಕಾಂತಾರ' ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ: ಅಪಘಾತದಲ್ಲಿ 6 ಮಂದಿಗೆ ಗಂಭೀರ ಗಾಯ

BREAKING: ‘ಕಾಂತಾರ’ ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ: ಅಪಘಾತದಲ್ಲಿ 6 ಮಂದಿಗೆ ಗಂಭೀರ ಗಾಯ

ಕೊಲ್ಲೂರು: ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರು ಪ್ರಯಾಣಿಸುತ್ತಿದ್ದ ಮಿನಿ ಬಸ್ ಅಪಘಾತ್ಕಕೀಡಾಗಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಲಾವಿದರನ್ನು ಕರೆದುಕೊಂಡು ಹೋಗುತ್ತಿದ್ದ ಮಿನಿ ಬಸ್ ಕೊಲ್ಲೂರು ಸಮೀಪ ಜಡ್ಕಳ್ ಬಳಿ ಪಲ್ಟಿಯಾಗಿದೆ. ಬಸ್ ನಲ್ಲಿ ಹಲವು ಮಂದಿ ಇದ್ದರು. 6 ಜನರಿಗೆ ಗಂಭೀರ ಪೆಟ್ಟಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರಾವಳಿ ಭಾಗದ ವಿವಿಧೆಡೆ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ ಚಾಪ್ಟರ್ 1’ ಚಿತ್ರೀಕರಣ ನಡೆಸಲಾಗುತ್ತಿದೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕೊಲ್ಲೂರಿಗೆ ತೆರಳುವಾಗ ಮಿನಿ ಬಸ್ ಪಲ್ಟಿಯಾಗಿದೆ. ಇದರಲ್ಲಿ 20 ಜೂನಿಯರ್ ಕಲಾವಿದರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular