HomeLive NewsBREAKING : 'ಕಾಂತಾರ' ವಿವಾದ : ನಟ ರಣವೀರ್ ಸಿಂಗ್‌'ಗೆ ಕರ್ನಾಟಕ ಹೈಕೋರ್ಟ್‌ನಿಂದ ತಾತ್ಕಾಲಿಕ...

BREAKING : ‘ಕಾಂತಾರ’ ವಿವಾದ : ನಟ ರಣವೀರ್ ಸಿಂಗ್‌’ಗೆ ಕರ್ನಾಟಕ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್.!

ಬೆಂಗಳೂರು : ಡಿವೈನ್ ಸ್ಟಾರ್   ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರ ಚಾಪ್ಟರ್ 1’ ಚಲನಚಿತ್ರದ ದೈವದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್  ನೀಡಿದೆ.

ಹೌದು.  ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್-1’ ಚಿತ್ರದ ದೈವದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು, ನಟನ ವಿರುದ್ಧ ಸದ್ಯಕ್ಕೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಅರ್ಜಿಯ ಮುಂದಿನ ವಿಚಾರಣೆಯನ್ನು ಮಾರ್ಚ್ 2ಕ್ಕೆ ಮುಂದೂಡಲಾಗಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುವಂತೆ ನ್ಯಾಯಾಲಯವು ನಟನಿಗೆ ನಿರ್ದೇಶಿಸಿದೆ.

ಬಾಲಿವುಡ್ ನಟ ರಣವೀರ್ ಸಿಂಗ್ ಅವರು, ‘ಕಾಂತಾರ ಚಾಪ್ಟರ್ 1’ ಚಿತ್ರದ ದೈವವನ್ನು ದೆವ್ವ ಎಂದು ಅವಮಾನ ಮಾಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ರಣವೀರ್ ಸಿಂಗ್ ವಿರುದ್ಧ ಸದ್ಯಕ್ಕೆ ಯಾವುದೇ ಬಲವಂತದ ಕ್ರಮ (coercive action) ಕೈಗೊಳ್ಳದಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ರಣವೀರ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು, ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಮಾರ್ಚ್ 2ಕ್ಕೆ ಮುಂದೂಡಿದೆ.ಹಾಗೂ  ನ್ಯಾಯಾಲಯವು ನಟನಿಗೆ ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸುವಂತೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

·ತನಿಖೆಗೆ ಸಹಕಾರ: ನ್ಯಾಯಾಲಯವು ಬಲವಂತದ ಕ್ರಮಕ್ಕೆ ತಡೆ ನೀಡಿದ್ದರೂ, ರಣವೀರ್ ಸಿಂಗ್ ಅವರು ಪೊಲೀಸರ ವಿಚಾರಣೆಗೆ ಮತ್ತು ತನಿಖೆಗೆ ಸಂಪೂರ್ಣವಾಗಿ ಸಹಕರಿಸಬೇಕೆಂದು ಸ್ಪಷ್ಟಪಡಿಸಿದೆ.

·  ಬಲವಂತದ ಕ್ರಮಕ್ಕೆ ತಡೆ: ಮಾರ್ಚ್ 2ರವರೆಗೆ ಪೊಲೀಸರು ನಟನ ವಿರುದ್ಧ ಯಾವುದೇ ಕಠಿಣ ಅಥವಾ ಬಲವಂತದ ಕ್ರಮಗಳನ್ನು ಕೈಗೊಳ್ಳುವಂತಿಲ್ಲ. ಮುಂದಿನ ವಿಚಾರಣೆಯ ವೇಳೆಗೆ ಪ್ರಕರಣಕ್ಕೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನ್ಯಾಯಾಲಯವು ಸೂಚಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular