
ಟೀಸರ್ ರಿಲೀಸ್ ಆದ 24 ಗಂಟೆಯಲ್ಲಿ 12 ಮಿಲಿಯನ್ ವೀವ್ಸ್ ಕಂಡಿದೆ. ಅಂದರೆ 1.2 ಕೋಟಿ ಬಾರಿ ವೀಕ್ಷಣೆ ಪಡೆದಿದೆ.
ಹೊಂಬಾಳೆ ಫಿಲಂಸ್ ನಿರ್ಮಾಣದ ‘ನಿರ್ಮಾಪಕ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಕಾಂತಾರ ಚಾಪ್ಟರ್ 1 ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. ರಿವೀಲ್ ಆದ ಫಸ್ಟ್ ಲುಕ್ ನಲ್ಲಿ ಇಂಗ್ಲಿಷ್ನಲ್ಲಿ “light…..Eveything is visibal in light. But this is just not light. Its a vision. Vision that choses what was, what is and what will be tomorrow..and you see’ ಎಂದು ರಿಷಬ್ ಹೇಳುತ್ತಾರೆ. ದಟ್ಟ ಗುಹೆಯಲ್ಲಿ ರುದ್ರಾಕ್ಷಿ ಮಾಲೆ ಧರಿಸಿ ನಿಂತಿರುವ ರಿಷಬ್ ಈ ಫಸ್ಟ್ ಲುಕ್ ನಲ್ಲಿ ಮಿಂಚಿದ್ದಾರೆ.

