BREAKING : ‘ಕಾಂತಾರ’ ಎಫೆಕ್ಟ್ : ಇನ್ಮುಂದೆ ಅರಣ್ಯದಲ್ಲಿ ಸಿನಿಮಾ, ಸೀರಿಯಲ್ ಶೂಟಿಂಗ್’ಗೆ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ.!

ಬೆಂಗಳೂರು : ಅರಣ್ಯ ಪ್ರದೇಶದಲ್ಲಿ ಇನ್ಮುಂದೆ ಸಿನಿಮಾ, ಧಾರಾವಾಹಿ, ಸಾಕ್ಷಚಿತ್ರ ಶೂಟಿಂಗ್’ಗೆ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಹೌದು, ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಖಡಕ್ ಸೂಚನೆ ನೀಡಿದ್ದಾರೆ.‘ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ ಇತ್ಯಾದಿಗಳನ್ನು ಚಿತ್ರೀಕರಿಸಲು ಶುಲ್ಕ ಪಡೆದು ಅನುಮತಿಸಲಾಗುತ್ತಿದೆ. ಪ್ರಸ್ತುತ ಅರಣ್ಯ ಪ್ರದೇಶದ ಚಿತ್ರೀಕರಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅನುಮತಿ ನೀಡುತ್ತಿರುವುದು ಸರಿಯಷ್ಟೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶದ ಚಿತ್ರೀಕರಣದಿಂದಾಗಬಹುದಾದ ತೊಂದರೆಗಳು ಹಾಗೂ ಇದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಚುರಗೊಂಡಿರುವುದನ್ನು ಗಮನಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಂತಾರಾ-2 ಸಿನಿಮಾ ಚಿತ್ರೀಕರಣದ ವೇಳೆ ಅರಣ್ಯ ಭೂಮಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಕಾಂತಾರ ಚಿತ್ರತಂಡಕ್ಕೆ ಬಿಗ್ ರಿಲೀಫ್

ರಿಷಬ್ ಶೆಟ್ಟಿ ಅಭಿನಯದ ಕಾಂತಾರ-2 ಚಿತ್ರತಂಡಕ್ಕೆ ಅರಣ್ಯ ಇಲಾಖೆ ಬಿಗ್ ರಿಲೀಫ್ ನೀಡಿದೆ. ಕಾಂತಾರ-2 ಚಿತ್ರತಂಡ ಯಾವುದೇ ಅರಣ್ಯ ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ವರದಿ ನೀಡಿದೆ.

ಹಾಸನ ಜಿಲ್ಲೆಯ ಸಕಲೇಶಪುರ ಬಳಿ ಅರಣ್ಯ ಪ್ರದೇಶದಲ್ಲಿ ಕಾಂತಾರ-2 ಸಿನಿಮಾ ಚಿತ್ರೀಕರಣ ಮಡಲಾಗುತ್ತಿದ್ದು, ಇದರಿಂದ ಅರಣ್ಯ ಪ್ರದೇಶಕ್ಕೆ ಹಾನಿಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಸಕಲೇಶಪುರ ಎಸಿಎಫ್ ಹಾಗೂ ಯಸಳೂರು ಆರ್ ಎಫ್ ಒ ಸ್ಥಳ ಪರಿಶೀಲನೆ ನಡೆಸಿದ್ದು, ಚಿತ್ರೀಕರಣದ ವೇಳೆ ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ. ಯಾವುದೇ ಸ್ಫೋಟ ನಡೆಸಿಲ್ಲ. ಡೀಮ್ಡ್ ಅರಣ್ಯ ವಲಯದಲ್ಲಿ ಮರಗಳನ್ನು ಕಡಿದಿಲ್ಲ. ಚಿತ್ರತಂಡ ಅರಣ್ಯ ನಿಯಮಗಳನ್ನು ಪಾಲಿಸಿ ಚಿತ್ರೀಕರಣ ಮಾಡಿದೆ ಎಂದು ವರದಿ ನೀಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read