HomeKarnatakaBIG NEWS: ಶಿವಮೊಗ್ಗದಿಂದ ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಒತ್ತಡ

BIG NEWS: ಶಿವಮೊಗ್ಗದಿಂದ ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಒತ್ತಡ

ಶಿವಮೊಗ್ಗ: ಶಿವಮೊಗ್ಗ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ಎನ್. ಚನ್ನಬಸಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಒತ್ತಾಯಿಸಲಾಗಿದೆ.

ಕಾಂತೇಶ್ ಅವರಿಗೆ ಟಿಕೆಟ್ ಕೈತಪ್ಪಿದ್ದು, ನನಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಬೇಸರವಾಗಿದೆ ಎಂದು ಕಾಂತೇಶ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನಗೆ ಟಿಕೆಟ್ ಸಿಗದಿರುವುದಕ್ಕೆ ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದಾರೆ. ತಂದೆ, ಸಂಘಟನೆ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪಕ್ಷ ಜವಾಬ್ದಾರಿ ನೀಡುವ ವಿಶ್ವಾಸವಿದೆ. ಬರುವ ದಿನಗಳಲ್ಲಿ ಒಳ್ಳೆಯ ಅವಕಾಶ ಸಿಗುವ ವಿಶ್ವಾಸವಿದೆ ಎಂದು ಕಾಂತೇಶ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular