HomeCrimeಕರಗ ಮೆರವಣಿಗೆ ವೇಳೆ ಗಲಾಟೆ: ಯುವಕನ ಹತ್ಯೆ

ಕರಗ ಮೆರವಣಿಗೆ ವೇಳೆ ಗಲಾಟೆ: ಯುವಕನ ಹತ್ಯೆ

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ ಯಾಗಿದ್ದು, ಈ ಸಂದರ್ಭದಲ್ಲಿ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ್ದಾರೆ.

ಡಿ. ಸಾರಥಿ ಮೃತಪಟ್ಟ ಯುವಕ. ಬೆಂಗಳೂರಿನ ಮೆಜೆಸ್ಟಿಕ್ ಸಮೀಪದ ಅಣ್ಣಮ್ಮ ದೇವಾಲಯದ ಬಳಿ ಕರಗ ಮಹೋತ್ಸವದ ವೇಳೆ ಯುವಕರ ನಡುವೆ ಗಲಾಟೆ ನಡೆದಿದ್ದು, ಶೇಷಾದ್ರಿಪುರಂ ನಿವಾಸಿ ಸಾರಥಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ.

ದೇವಾಲಯದ ಮುಂದೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಸಾರಥಿ ಮತ್ತು ಸ್ನೇಹಿತರನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ್ದರು. ಈ ವಿಚಾರಕ್ಕೆ ಗುಂಪುಗಳ ನಡುವೆ ಗಲಾಟೆ ನಡೆದು ಸಾರಥಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳು ಸಾರಥಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular