HomeLatest News'ಕರಾಮುವಿವಿ' ಯಿಂದ UGC-NET, K-SET ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

‘ಕರಾಮುವಿವಿ’ ಯಿಂದ UGC-NET, K-SET ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲಿರುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನಾ ಸಹಾಯಕರ (ಜೆಆರ್‍ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರದಲ್ಲಿ ನೀಡಲು ನಿರ್ಧರಿಸಲಾಗಿದೆ.

ಆಸಕ್ತರು ಇದೇ ಜೂನ್ 30 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ.ಎಸ್.ಕೆ.ನವೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular