HomeLatest NewsRAIN ALERT: ಜುಲೈ 3ರವರೆಗೆ ಭಾರಿ ಮಳೆ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

RAIN ALERT: ಜುಲೈ 3ರವರೆಗೆ ಭಾರಿ ಮಳೆ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತಸ್ಥಗೊಂಡಿದೆ. ಈ ನಡುವೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಜುಲೈ 3ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್, ಮತ್ತೆ ಕೆಲ ಜಿಲ್ಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವ್ಯಾಪವಾಗಿ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಇಂದು ಧಾರಾಕಾರ ಮಳೆಯಾಗಲಿದ್ದು, ಈ ಹಿನ್ನಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಸನ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ವಿಜಯನಗರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular