HomeLatest NewsBREAKING: ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಕೊಡಗು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ |...

BREAKING: ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಕೊಡಗು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ | Rain Alert

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ನಾಳೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ನಾಳೆಯಿಂದ ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ನದಿತೀರ, ಬೆಟ್ಟಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಢಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಳೆ ಮೂರು ದಿನ ಭಾರಿ ಮಳೆಯಾಗಲಿದೆ. ನಾಳೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ 13 ಹಾಗೂ 14ರಂದು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳುರು, ಶಿವಮೊಗ್ಗ, ಕೊಡಗು, ಹಾವೇರಿ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular