HomeKarnatakaBIG NEWS: 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

BIG NEWS: 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ರಾಯಚೂರು, ಯಾದಗಿರಿ, ವಿಜಯನಗರ, ಕೊಪ್ಪಳ, ಕಲಬುರಗಿ, ಹಾವೇರಿ, ಗಹಗ, ಬೀದರ್, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಾರ್ಚ್ 28ರವರೆಗೂ ಮಳೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಮಗಳೂರು ಹಾಗೂ ಬೆಳಗಾವಿ, ಬೀದರ್ , ವಿಜಯಪುರದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಕಲಬುರಗಿಯಲ್ಲಿ ಅತ್ಯಂತ ಗರಿಷ್ಠ್ ಉಷ್ಣಾಂಶ 38.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular