HomeLatest NewsBIG NEWS: ಅತಿ ಹೆಚ್ಚು ಮಳೆ ಮುನ್ಸೂಚನೆ: 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

BIG NEWS: ಅತಿ ಹೆಚ್ಚು ಮಳೆ ಮುನ್ಸೂಚನೆ: 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ವರುಣಾರ್ಭಟ ಜೋರಾಗಲಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 10ರವರೆಗೂ ಭಾರಿ ಮಳೆಯಾಗಲಿದೆ.

ಬೆಳಗಾವಿ, ಕೊಡಗು, ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡದಲ್ಲಿಯೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular