ನಿಜವಾದ ಮೈಲಾರ ಕಾರ್ಣಿಕ: ಸಿದ್ದರಾಮಯ್ಯ ಸಿಎಂ

ಹೊಸಪೇಟೆ: ವಿಜಯನಗರ ಜಿಲ್ಲೆ ಮೈಲಾರದ ಮೈಲಾರಲಿಂಗೇಶ್ವರ ದೇವರ ಗೊರವಪ್ಪ ನುಡಿದ ಕಾರ್ಣಿಕ ನಿಜವಾಗಿದ್ದು, ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿದೆ ಎಂಬ ಚರ್ಚೆ ನಡೆದಿದೆ.

‘ಅಂಬಲಿ ಹಳಸಿತು ಕಂಬಳಿ ಬೀಸಿತಲೇ ಪರಾಕ್’ ಎಂದು ಗೊರವಪ್ಪ ಕಾರ್ಣಿಕ ನುಡಿದಿದ್ದು, ಅದರ ಒಳಾರ್ಥದಂತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆ. ಹಾಲುಮತ ಸಮಾಜದೊಂದಿಗೆ ಕಂಬಳಿ ಭಾವನಾತ್ಮಕವಾಗಿ ಬೆಸೆದುಕೊಂಡಿದ್ದು, ಸಿದ್ದರಾಮಯ್ಯ ಹಾಲುಮತ ಸಮಾಜದವರಾಗಿದ್ದಾರೆ. ಮೈಲಾರ ಕಾರ್ಣಿಕ ನುಡಿಯ ಬಗ್ಗೆ ಭಕ್ತರು ಭವಿಷ್ಯ ನಿಜವಾಗಿದೆ ಎಂದು ಚರ್ಚೆ ನಡೆಸಿದ್ದಾರೆ.

ಮೈಲಾರ ಜಾತ್ರೆಯ ಸಂದರ್ಭದಲ್ಲಿ ಗೊರವಪ್ಪ ನುಡಿದ ಕಾರ್ಣಿಕವನ್ನು ಮಳೆ, ಬೆಳೆ, ರಾಜಕೀಯ ಮೊದಲಾದ ಕ್ಷೇತ್ರಗಳೊಂದಿಗೆ ಸಮೀಕರಿಸಲಾಗುತ್ತದೆ. 2023ರ ಫೆಬ್ರವರಿಯಲ್ಲಿ ‘ಅಂಬಲಿ ಹಳಸಿತು ಕಂಬಳಿ ಬೀಸಿತಲೇ ಪರಾಕ್’ ಎಂದು ಗೊರವಪ್ಪ ಕಾರ್ಣಿಕ ನುಡಿದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಯ್ಕೆ ಆಗುತ್ತಿದ್ದಂತೆ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ ನಿಜವಾಗಿದೆ ಎನ್ನುವ ಚರ್ಚೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read