HomeEntertainmentಎರಡು ವಾರ ಪೂರೈಸಿದ 'ಕರಟಕ ದಮನಕ'

ಎರಡು ವಾರ ಪೂರೈಸಿದ ‘ಕರಟಕ ದಮನಕ’

ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಕರಟಕ ದಮನಕ’ ಚಿತ್ರ ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿದೆ. ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾ ಇದೀಗ ಎರಡು ವಾರಗಳನ್ನು ಪೂರೈಸುವ ಮೂಲಕ ತನ್ನ ನಾಗಾಲೋಟವನ್ನು ಮುಂದುವರೆಸಿದೆ.

ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಡ್ಯಾನ್ಸ್ ಕಿಂಗ್ ಪ್ರಭುದೇವ ನಾಯಕರಾಗಿದ್ದು, ಇನ್ನುಳಿದಂತೆ ನಿಷ್ವಿಕ ನಾಯ್ಡು, ಮತ್ತು ಪ್ರಿಯಾ ಆನಂದ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ, ಸಂತೋಷ್ ರಾಯ್ ಪತಾಜೆ, ಛಾಯಾಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular