ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಅಲ್ಪಸಂಖ್ಯಾತರ ಮೊರ್ರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 6,7,8,9 ಮತ್ತು 11 ನೇ ತರಗತಿಯ ವಿದ್ಯಾರ್ಥಿನಿಯರಿಗೆ ಕರಾಟೆ-ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ನುರಿತ ಕರಾಟೆ ಮಹಿಳಾ ತರಬೇತಿದಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಕರಾಟೆ ತರಗತಿಯ ಪ್ರಮಾಣ ಪತ್ರ ಹಾಗೂ ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಸೆ.22 ರೊಳಗೆ ಜಿಲ್ಲಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಆಕಾಶವಾಣಿ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಹಾಸನ ಇಲ್ಲಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಹಾಸನ. ದೂರವಾಣಿ ಸಂಖ್ಯೆ: 08172-268373/08172-267373 ಗೆ ಸಂಪರ್ಕಿಸಬಹುದಾಗಿದೆ. ಅಥವಾ ಆಯಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಹಾಸನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.