HomeLatest Newsಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಕರಾಟೆ, ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ: ನುರಿತ ಕರಾಟೆ ಮಹಿಳಾ ತರಬೇತಿದಾರರಿಂದ ಅರ್ಜಿ

ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಕರಾಟೆ, ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ: ನುರಿತ ಕರಾಟೆ ಮಹಿಳಾ ತರಬೇತಿದಾರರಿಂದ ಅರ್ಜಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಅಲ್ಪಸಂಖ್ಯಾತರ ಮೊರ್ರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 6,7,8,9 ಮತ್ತು 11 ನೇ ತರಗತಿಯ ವಿದ್ಯಾರ್ಥಿನಿಯರಿಗೆ ಕರಾಟೆ-ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ನುರಿತ ಕರಾಟೆ ಮಹಿಳಾ ತರಬೇತಿದಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಅರ್ಹ ಅಭ್ಯರ್ಥಿಗಳು ಕರಾಟೆ ತರಗತಿಯ ಪ್ರಮಾಣ ಪತ್ರ ಹಾಗೂ ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಸೆ.22 ರೊಳಗೆ ಜಿಲ್ಲಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಆಕಾಶವಾಣಿ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಹಾಸನ ಇಲ್ಲಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಹಾಸನ. ದೂರವಾಣಿ ಸಂಖ್ಯೆ: 08172-268373/08172-267373 ಗೆ ಸಂಪರ್ಕಿಸಬಹುದಾಗಿದೆ. ಅಥವಾ ಆಯಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಹಾಸನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular