HomeKarnatakaBIG NEWS: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಮತ್ತೆ ಕರವೇ ನಾರಾಯಣಗೌಡ ಪೊಲೀಸ್ ವಶಕ್ಕೆ

BIG NEWS: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಮತ್ತೆ ಕರವೇ ನಾರಾಯಣಗೌಡ ಪೊಲೀಸ್ ವಶಕ್ಕೆ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ಪ್ರತಿಭಟನೆ ತೀವ್ರ ಸ್ವರೂಪಗೊಂಡು, ಹಲವು ಹೋಟೆಲ್, ಅಂಗಡಿಗಳ ನಾಮಫಲಕ ಧ್ವಂಸಗೊಳಿಸಿದ ಪ್ರಕರಣದಲ್ಲಿ ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಎರಡು ದಿನಗಳ ಹಿಂದಷ್ಟೇ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದರು. ಆದರೆ ಈಗ ಪೊಲೀಸರು ಮತ್ತೆ ಅವರನ್ನು ವಶಕ್ಕೆ ಪಡೆದಿದ್ದಾರೆ.

ಕರವೇ ನಾರಾಯಣಗೌಡ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ವಶಕ್ಕೆ ಪಡೆದಿದ್ದು, ಮಾರ್ಥಾಸ್ ಆಸ್ಪತ್ರೆಯಲ್ಲಿ ಆರೋಗ್ಯ ಪರೀಕ್ಷೆ ಮಾಡಲಾಗುತ್ತಿದೆ. ಬಳಿಕ ನಾರಾಯಣಗೌಡ ಅವರನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.

2017ರಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕರವೇ ನಾರಾಯಣಗೌಡ ಅವರನ್ನು ಮತ್ತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular