ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಕರವೆಯಿಂದ ಜನಜಾಗೃತಿ; ಬೃಹತ್ ಪ್ರತಿಭಟನಾ ಮೆರವಣಿಗೆ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆ ಮಾಡುವಂತೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರವೇ ನಾರಾಯಣಗೌಡ ಬಣ ಬೆಂಗಳೂರಿನ ಸಾದಹಳ್ಳಿ ಗೇಟ್ ಬಳಿ ವಿಶೇಷ ಪ್ರತಿಭಟನೆ ನಡೆಸುತ್ತಿದ್ದು, ಬೃಹತ್ ಮೆರವಣಿಗೆ ನಡೆಸಲು ಸಜ್ಜಾಗಿದ್ದಾರೆ.

ಬೆಂಗಳೂರು ಏರ್ ಪೋರ್ಟ್ ಬಳಿಯ ಸಾದಹಳ್ಳಿ ಗೇಟ್ ಬಳಿಯ ಟೋಲ್ ಫ್ಲಾಜಾದಿಂದ ರ್ಯಾಲಿ ಆರಂಭವಾಗಲಿದ್ದು, ಕಬ್ಬನ್ ಪಾರ್ಕ್ ವರೆಗೂ ರ್ಯಾಲಿ ಸಾಗಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ, ಟ್ರಾಫಿಕ್ ಜಾಮ್ ಸಂಭವಿಸದಂತೆ ಭದ್ರತೆಗಾಗಿ 150ಕ್ಕೂ ಹೆಚ್ಚು ಪೊಲೀಸರನ್ನು ಸಾದಹಳ್ಳಿ ಗೇಟ್ ಬಳಿ ನಿಯೋಜಿಸಲಾಗಿದೆ.

ರ್ಯಾಲಿ, ಪ್ರತಿಭಟನೆ ವೇಳೆ ಜನ ಜಂಗುಳಿಯಿಂದ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇರುವುದರಿಂದ ಪೊಲಿಸರು ಸುಮಾರು 500 ಮೀಟರ್ ವರೆಗೆ ಸೈಡ್ ವಾಲ್ ಅಳವಡಿಕೆ ಮಾಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read