HomeKarnatakaBIG NEWS: 29 ಕರವೇ ಕಾರ್ಯಕರ್ತರು ನ್ಯಾಯಾಂಗ ಬಂಧನಕ್ಕೆ

BIG NEWS: 29 ಕರವೇ ಕಾರ್ಯಕರ್ತರು ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ್ದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಲ್ಲುತೂರಾಟ ನಡೆಸಿ, ಹಲವು ಕಟ್ಟಡಗಳ ಬೋರ್ಡ್ ಗಳನ್ನು ಧ್ವಂಸಗೊಳಿಸಿದ್ದರು. ಪ್ರತಿಭಟನೆ ತೀವ್ರಸ್ವರೂಪ ಪಡೆದ ಹಿನ್ನೆಲೆಯಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು.

ಬಂಧಿತರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಇದೀಗ ನಾರಾಯಣಗೌಡ ಸೇರಿದಂತೆ 29 ಕರವೇ ಕಾರ್ಯಕರ್ತರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನವರಿ 10ರವರೆಗೆ 29 ಕರವೇ ಕಾರ್ಯಕರ್ತರಿಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ನಾರಾಯಣಗೌಡ ಸೇರಿದಂತೆ 29 ಕರವೇ ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular