HomeKarnatakaBIG NEWS: ಮತ್ತೆ ಕರಾವಳಿ, ಮಲೆನಾಡಿನಲ್ಲಿ ಹೆಚ್ಚಲಿದೆ ಮಳೆ ಅಬ್ಬರ: ಅಲರ್ಟ್ ಘೋಷಣೆ

BIG NEWS: ಮತ್ತೆ ಕರಾವಳಿ, ಮಲೆನಾಡಿನಲ್ಲಿ ಹೆಚ್ಚಲಿದೆ ಮಳೆ ಅಬ್ಬರ: ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ವರುಣಾರ್ಭಟ ಕಡಿಮೆಯಾಗಿದೆ. ಆದರೆ ಕರಾವಳಿ, ಮಲೆನಾಡು ಭಾಗದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಮೈಸೂರು, ಮಂಡ್ಯ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡ , ಉತ್ತರ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ, ಕಲಬುರ್ಗಿ, ಬೀದರ್, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ, ಕೋಲಾರ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular