HomeLatest NewsBIG NEWS: ಕರಾವಳಿ ಜಿಲ್ಲೆಗಳಿಗೆ ಏಕ, ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ ಸೌಲಭ್ಯ

BIG NEWS: ಕರಾವಳಿ ಜಿಲ್ಲೆಗಳಿಗೆ ಏಕ, ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ ಸೌಲಭ್ಯ

ಬೆಳಗಾವಿ: ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ಭಿನ್ನವಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಅವರು, ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಒಳಪಡದೇ ಇರುವ ಗ್ರಾಮ ಪಂಚಾಯತಿಯಲ್ಲಿನ ಒಂದು ಎಕರೆ ಒಳಗಿನ ಜಮೀನುಗಳಿಗೆ ಅನುಮೋದನೆ ನೀಡುವ ಪ್ರಕರಣಗಳಿಗೆ ತಾಂತ್ರಿಕ ಅನುಮೋದನೆ ನೀಡಲು ಸಹಾಯಕ ನಿರ್ದೇಶಕರ ಕಛೇರಿ ಹಾಗೂ ಹತ್ತಿರದ ಯೋಜನಾ ಪ್ರಾಧಿಕಾರಗಳ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ, ತಾಲ್ಲೂಕು ಪಂಚಾಯತಿ ಕಛೇರಿಯಲ್ಲಿಯೇ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸಲು ಆದೇಶಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಜಿಲ್ಲೆ ಒಳಗೊಂಡಂತೆ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತ ನಿಯಮಗಳನ್ನು ಸಮನ್ವಯಗೊಳಿಸಲು ಮತ್ತು ವಿನ್ಯಾಸ ಅನುಮೋದನೆಯನ್ನು ಪಾರದರ್ಶಕತೆ ಹಾಗೂ ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular