HomeKarnatakaಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತ, ಮಾಜಿ ಎಂಎಲ್ ಸಿ ಕರಿಯಣ್ಣ ಸಂಗಟಿ ವಿಧಿವಶ

ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತ, ಮಾಜಿ ಎಂಎಲ್ ಸಿ ಕರಿಯಣ್ಣ ಸಂಗಟಿ ವಿಧಿವಶ

ಬೆಂಗಳೂರು: ಮಾಜಿ ಎಂಎಲ್ ಸಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತ ಕರಿಯಣ್ಣ ಸಂಗಟಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.

ಕೆಲ ದಿಬಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕರಿಯಣ್ಣ ಸಂಗಟಿ ಅವರು ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದ ನಿವಾಸಿಯಾಗಿದ್ದ ಕರಿಯಣ್ಣ ಸಂಗಟಿ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರಳ ವ್ಯಕ್ತಿತ್ವ ಮತ್ತು ಸಂಘಟನಾ ಸಾಮರ್ಥ್ಯದಿಂದ ಅವರು ಜನಮನ್ನಣೆ ಗಳಿಸಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಆಪ್ತರಾಗಿದ್ದ ಅವರು ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಕರಿಯಣ್ಣ ಸಂಗಟಿ ನಿಧನಕ್ಕೆ ರಾಜಕೀಯ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular