HomeKarnatakaಸಿದ್ದರಾಮಯ್ಯನವರೇ ‘ಮುಡಾ’ ಹಗರಣದಿಂದ ಬಚಾವಾಗಲು ಅದೇ ಲೋಕಾಯುಕ್ತವೇ ಗತಿ : Karma Hit back ಎಂದ...

ಸಿದ್ದರಾಮಯ್ಯನವರೇ ‘ಮುಡಾ’ ಹಗರಣದಿಂದ ಬಚಾವಾಗಲು ಅದೇ ಲೋಕಾಯುಕ್ತವೇ ಗತಿ : Karma Hit back ಎಂದ H.D ಕುಮಾರಸ್ವಾಮಿ

ಬೆಂಗಳೂರು : ಶ್ರೀಮಾನ್ ಸಿದ್ದರಾಮಯ್ಯನವರೇ.. ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇ ಉಘೇ ಎನ್ನಲೇಬೇಕು, ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು: ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ ಎಂದು ಮಾಜಿ ಸಿಎಂ ಹೆಚ್ಡಿಕೆ ಟ್ವೀಟ್ ಮೂಲಕ ಕುಟುಕಿದ್ದಾರೆ.

ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು: ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ!! Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ?

ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ‘ ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು.. ನಿಮಗೂ ಭಯವಿದೆsss!! ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ? ಎಂದು ಹೆಚ್ಡಿಕೆ ಕುಟುಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular