HomeKarnatakaಕರಾವಳಿ ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆ: ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ...

ಕರಾವಳಿ ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆ: ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದಲೇ ಬಿಸಿಲ ಝಳ ಜನರನ್ನು ಹೈರಾಣಾಗಿಸುತ್ತಿದೆ. ವಿಪರೀತ ಸೆಖೆ, ಬಿಸಿ ಗಾಳಿಯಿಂದಾಗಿ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಬಸವಳಿದು ಹೋಗುತ್ತಿದ್ದಾರೆ. ಈ ನಡುವೆ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುತ್ತಿದ್ದು, ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ.

ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಉಷ್ಣತೆ ಜೊತೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀ೦ಡಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಾಂತೂ ಸುಡು ಬಿಸಿಲಿನಿಂದ ಕಾದ ಕಾವಲಿಯಂತಾಗಿದೆ.

ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗಲಿದ್ದು, 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದೆ. ಈ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಮುಂದಿನ 5 ದಿನದವರೆಗೂ ಕರಾವಳಿಯಲ್ಲಿ ಇದೇ ರೀತಿಯ ವಾತಾವರಣವಿರಲಿದೆ. ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯೂ ಇದೆ

ಇನ್ನು ಉತ್ತರ ಒಳನಾಡಿನ ಗದಗ, ಕಲಬುರ್ಗಿ, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ.

ರಾಜ್ಯಾದ್ಯಂತ ತಾಪಮಾನ ಹೆಚ್ಚಾಗುತ್ತಿದ್ದು, ಹೀಟ್ ವೇವ್ ನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.ಅನಗತ್ಯವಾಗಿ ಮನೆಯಿಂದ ಹೊರಬರುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular